ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
“ನಾನು ನಿಮ್ಮ ಹೆಚ್ಚು ಸಮಯವನ್ನು ತೆಗೆದುಕೊಳ್ಳುವುದಿಲ್ಲ, ಭಾರತೀಯ ಕ್ರಿಕೆಟಿಗನಾಗಿ ಇಂದು ನನ್ನ ಕೊನೆಯ ದಿನ” : ರವಿಚಂದ್ರನ್ ಅಶ್ವಿನ್
ಭಾರತೀಯ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯಾ ದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಮಧ್ಯೆ ಅಶ್ವಿನ್ ದಿಡೀರ್ ನಿವೃತ್ತಿ ನಿರ್ಧಾರ ಘೋಷಣೆ ಮಾಡಿದ್ದು, ಬ್ರಿಸ್ಬೇನ್ ನ ಗಾಬಾದಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯ ಡ್ರಾ ಗೊಂಡಿರುವ ಬೆನ್ನಲ್ಲೇ ಬಿ.ಸಿ.ಸಿ.ಐ ಅಶ್ವಿನ್ ರವರ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದೆ.
ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ದಿಗ್ಗಜ ಅನಿಲ್ ಕುಂಬ್ಳೆ(619) ಬಳಿಕ ಅತೀ ಹೆಚ್ಚು ವಿಕೆಟ್ ಗಳಿಸಿರುವ ದಾಖಲೆ ಅಶ್ವಿನ್ ರವರ ಹೆಸರಿನಲ್ಲಿದ್ದು, ಅಶ್ವಿನ್ 106 ಟೆಸ್ಟ್ ಪಂದ್ಯಗಳಲ್ಲಿ 537 ವಿಕೆಟ್ ಗಳಿಸಿದ್ದಾರೆ.
38 ವರ್ಷದ ಅಶ್ವಿನ್ ಅಡಿಲೇಡ್ ನಲ್ಲಿ ನಡೆದ ಹಗಲು-ರಾತ್ರಿ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಕೊನೆಯದಾಗಿ ಭಾರತದ ಪರವಾಗಿ ಆಡಿದ್ದು, ಒಂದು ವಿಕೆಟ್ ಗಳಿಸಿದ್ದರು.
“ನಾನು ನಿಮ್ಮ ಹೆಚ್ಚು ಸಮಯವನ್ನು ತೆಗೆದುಕೊಳ್ಳುವುದಿಲ್ಲ, ಭಾರತೀಯ ಕ್ರಿಕೆಟಿಗನಾಗಿ ಇಂದು ನನ್ನ ಕೊನೆಯ ದಿನ” ಎಂದು ಅಶ್ವಿನ್ ಹೇಳಿದ್ದಾರೆ.
Comments