ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ “ಜೈ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!!
ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಟನೆಯ “ಜೈ” ತುಳು ಸಿನಿಮಾದಲ್ಲಿ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟನೆ..!!
ಟೈಟಲ್ ಮೂಲಕವೇ ಭಾರಿ ಸದ್ದು ಮಾಡುತ್ತಿರುವ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರು ನಾಯಕ ನಟನಾಗಿ ಅಭಿನಯಿಸುತ್ತಿರುವ “ಜೈ” ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಖ್ಯಾತ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಂದಿದ್ದು, ತುಳು ಚಿತ್ರಪ್ರೇಮಿಗಳ ಮನದಲ್ಲಿ ಸಂಭ್ರಮ ಮನೆಮಾಡಿದೆ.
ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲ್ಡ್ ಮತ್ತು ಮುಗೋಡಿ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದ್ದು, ಗಿರ್ಗಿಟ್, ಸರ್ಕಸ್ ಮತ್ತು ಗಮ್ಮಲ್ ನಂತಹ ಜನಪ್ರಿಯ ತುಳು ಚಲನಚಿತ್ರಗಳನ್ನು ತುಳು ಚಿತ್ರರಂಗಕ್ಕೆ ನೀಡಿದ ತಂಡ ಇದೀಗ ಜೈ ಚಿತ್ರದಲ್ಲಿ ತೊಡಗಿಸಿಕೊಂಡಿದೆ.
ರೂಪೇಶ್ ಶೆಟ್ಟಿ ಈ ಚಿತ್ರದ ನಿರ್ದೇಶಕರಾಗಿದ್ದು, ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಲಾಯ್ ವ್ಯಾಲೆಂಟೈನ್ ಸಲ್ದಾನಾ ಸಂಗೀತವಿದ್ದು, ವಿನುತ್.ಕೆ ರವರ ಕ್ಯಾಮರಾ ಕೈಚಳಕವಿದೆ.
ಚಿತ್ರತಂಡವು ಈಗಾಗಲೇ ಟೈಟಲ್ ಟೀಸರ್ ಬಿಡುಗಡೆ ಮಾಡಿದ್ದು, ವಿಭಿನ್ನವಾಗಿ ಮೂಡಿಬಂದಿದೆ.
ರಾಜಕೀಯ ಕತೆಯನ್ನು ಒಳಗೊಂಡಿರುವ ಚಿತ್ರದಲ್ಲಿ ಮೊದಲ ಬಾರಿಗೆ ಖ್ಯಾತ ನಟ ದೇವದಾಸ್ ಕಾಪಿಕಾಡ್ ಗಂಭೀರ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.
ಚಿತ್ರದಲ್ಲಿ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್ ಸೇರಿದಂತೆ ಹಲವಾರು ಕಲಾವಿದರು ಅಭಿನಯಿಸಲಿದ್ದಾರೆ.
ಚಿತ್ರದ ನಾಯಕಿಯ ಬಗ್ಗೆ ಇದುವರೆಗೆ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ.
ಒಟ್ಟಿನಲ್ಲಿ ಭಿನ್ನ ಪರಿಕಲ್ಪನೆಯೊಂದಿಗೆ ತಯಾರಾಗುತ್ತಿರುವ “ಜೈ” ಸಿನಿಮಾ ತುಳು ಚಿತ್ರಪ್ರೇಮಿಗಳಲ್ಲಿ ಈಗಾಗಲೇ ಭಾರೀ ನಿರೀಕ್ಷೆ ಹುಟ್ಟು ಹಾಕಿರುವುದಂತೂ ಸುಳ್ಳಲ್ಲ
Comments