ಕುಕ್ಕೆ ಸುಬ್ರಹ್ಮಣ್ಯ : ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ
ಕುಕ್ಕೆ ಸುಬ್ರಹ್ಮಣ್ಯ : ದ.ಕ ಜಿಲ್ಲಾ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನಡೆಯುತ್ತಿದೆ. ಡಿ.07 ರಂದು ಪ್ರಾತಃಕಾಲ ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಈಗಾಗಲೇ ರಥ ಕಟ್ಟುವ ಕಾರ್ಯ ನಡೆಯುತ್ತಿದೆ. ಈ ರಥ ಕಟ್ಟುವ ಕಾರ್ಯದ ಬಗ್ಗೆ ಹಾಗೂ ಈ ಪುಣ್ಯ ಕಾರ್ಯವನ್ನು ನಡೆಸುವ ಮಲೆಕುಡಿಯ ಜನಾಂಗದ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಇಂದು(ಡಿ.05) ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಂಸದರು ರಥ ಕಟ್ಟುವ ಪುಣ್ಯ ಕಾರ್ಯವನ್ನು ಮಾಡುತ್ತಿರುವವರನ್ನು ಗೌರವಿಸಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕು| ಭಾಗೀರಥಿ ಮುರುಳ್ಯ, ಬಿಜೆಪಿ ಸುಳ್ಯ ಮಂಡಲ ಅಧ್ಯಕ್ಷರಾದ ವೆಂಕಟ್ ವಳಲಂಬೆ ಸೇರಿದಂತೆ ಸುಬ್ರಹ್ಮಣ್ಯದ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.


Comments