ಮಹಾಕುಂಭ ಮೇಳದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭ ಮೇಳದ ಮೊದಲ ದಿನವಾದ ಇಂದು 1 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಪ್ರಯಾಗರಾಜ್ : ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ 45 ದಿನಗಳ ಕಾಲ ನಡೆಯುವ ಮಹಾಕುಂಭ ಮೇಳಕ್ಕೆ ಇಂದು ಚಾಲನೆ ಸಿಕ್ಕಿದೆ. ಮೊದಲ ದಿನವಾದ ಇಂದು 1 ಕೋಟಿ ಭಕ್ತರು ತೀರ್ಥ ಸ್ನಾನ ಮಾಡಿದ್ದಾರೆ. ಈ ಮಹಾಕುಂಭದಲ್ಲಿ 40 ಕೋಟಿಗೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ತ್ರಿವೇಣಿ ಸಂಗಮದಲ್ಲಿ ಭಕ್ತರ ದಟ್ಟಣೆ ಮುಂದುವರೆದಿದೆ. ಈ ಪ್ರದೇಶದಲ್ಲಿ ಡ್ರೋನ್ ಕಣ್ಗಾವಲು ಸಹ ಮಾಡಲಾಗುತ್ತಿದೆ. ಭದ್ರತೆಗಾಗಿ ನೀರೊಳಗಿನ ಡ್ರೋನ್‌ಗಳನ್ನು ಸಹ ಬಳಸಲಾಗಿದೆ. ಹರಿದ್ವಾರ, ಪ್ರಯಾಗರಾಜ್, ಉಜ್ಜಯಿನಿ ಮತ್ತು ನಾಸಿಕ್‌ಗಳಲ್ಲಿ ಪ್ರತಿ 12 ವರ್ಷಗಳಿಗೊಮ್ಮೆ ಕುಂಭಮೇಳವನ್ನು ಆಯೋಜಿಸಲಾಗುತ್ತದೆ. ಇವುಗಳಲ್ಲಿ ಪ್ರಯಾಗರಾಜ್‌ನಲ್ಲಿ ನಡೆಯುವ ಮಹಾ ಕುಂಭ ಮೇಳ ಅತ್ಯಂತ ವಿಶೇಷವಾಗಿರುತ್ತದೆ.
Comments