ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ
ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆ

ಮಾರ್ಚ್ 25: ಕರ್ನಾಟಕದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಕಳೆದ ಎರಡು ದಿನಗಳಿಂದ ಅಲ್ಲಲ್ಲಿ ಮಳೆಯಾಗುತ್ತಿದ್ದು ಸ್ವಲ್ಪ ತಂಪೆನಿಸಿದರೂ ಕಾದ ಭೂಮಿಗೆ ನೀರು ಬಿದ್ದು ಧಗೆ ಎದ್ದಿದೆ. ಮತ್ತೆ ಸೆಕೆ ಶುರುವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ಮಾರ್ಚ್ 27,28 ರಂದು ರಾಜ್ಯಾದ್ಯಂತ ಒಣಹವೆ ಇರಲಿದ್ದು, 29ರಿಂದ ಮತ್ತೆ ಮಳೆ ಶುರುವಾಗಲಿದೆ.

Comentarios