ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ
ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿದ ವಿದ್ಯಾರ್ಥಿ
ಮೊಬೈಲ್ ವಶಪಡಿಸಿಕೊಂಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ಶಿಕ್ಷಕರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲಿ ಮೊಬೈಲ್ ಬಳಕೆ ಮಾಡಿ ಶಾಲಾ ನಿಯಮಗಳನ್ನು ಉಲ್ಲಂಘಿಸಿದ ಘಟನೆ ನಡೆದಿದೆ. ಶಾಲೆಯು ಕಟ್ಟುನಿಟ್ಟಾದ ನೋ-ಫೋನ್ ನೀತಿಯನ್ನು ಹೊಂದಿದೆ. ಮತ್ತು ಫೋನ್ ವಶಪಡಿಸಿಕೊಂಡಿದ್ದಕ್ಕಾಗಿ ಶಿಕ್ಷಕರ ಕ್ರಮದ ವಿರುದ್ಧ ವಿದ್ಯಾರ್ಥಿ ಆಕ್ರೋಶಗೊಂಡಿದ್ದ.
ವಿದ್ಯಾರ್ಥಿಯು ತನ್ನ ಫೋನ್ ತೆಗೆದುಕೊಂಡಾಗ ಆರಂಭದಲ್ಲಿ ಗಲಾಟೆ ಮಾಡಿದ್ದಾನೆ. ನಂತರ ಆತನನ್ನು ಪ್ರಾಂಶುಪಾಲರ ಕಚೇರಿಗೆ ಕರೆಸಿಕೊಂಡಾಗ ಶಾಲೆಯಿಂದ ಹೊರಗೆ ಕಾಲಿಟ್ಟರೆ ಕೊಲೆ ಮಾಡುವುದಾಗಿ ಹೇಳಿ ಶಿಕ್ಷಕರಿಗೆ ಬೆದರಿಕೆ ಹಾಕಿದ್ದಾನೆ. ಈ ಘಟನೆ ಶುಕ್ರವಾರ ನಡೆದಿದ್ದು, ಶಿಕ್ಷಕರು ಇದುವರೆಗೆ ಯಾವುದೇ ದೂರು ದಾಖಲಿಸಿಲ್ಲ. ಘಟನೆಯ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
Comments